ವಿದ್ಯಾರ್ಥಿಗಳೇ ನೀಟ್ ಎಕ್ಸಾಂ ನೀಟಾಗಿ ಬರೆಯಿರಿ

ಎಂಬಿಬಿಎಸ್ ಮತ್ತು ಬಿಡಿಎಸ್ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸುವ 2019 ನೇ ಸಾಲಿನ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಭಾನುವಾರ( ಮೇ 5 ರಂದು) ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವಿವಿಧ ಕೇಂದ್ರಗಳು ಸೇರಿದಂತೆ ದೇಶಾದ್ಯಂತ ನಡೆಯಲಿದೆ.
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಪರೀಕ್ಷೆ ನಡೆಸಲಿದೆ. ರಾಜ್ಯದ ದ.ಕ. ಜಿಲ್ಲೆ ಸಹಿತ 9 ಜಿಲ್ಲೆಗಳ ಸುಮಾರು 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರಾವಾಡ, ಕಲಬುರಗಿ, ಹುಬ್ಬಳ್ಳಿ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಪರೀಕ್ಷೆ ನಡೆಯಲಿದೆ.
ನಗರದ ಸೈಂಟ್ ಅಲೋಶಿಯಸ್, ಶಾರದಾ ವಿದ್ಯಾನಿಲಯ, ಕೆನರಾ ಕಾಲೇಜು, ಬಜಪೆ ಶ್ರೀದೇವಿ ಕಾಲೇಜು ಪರೀಕ್ಷಾ ಕೇಂದ್ರಗಳಾಗಿವೆ.

Share