ಕುಡ್ಲ ಸಿಟಿಯೊಳಗೆ ರಾತ್ರಿ ವೇಳೆ ಬೀದಿ ನಾಯಿಗಳಿಂದ ನಡೆಯುವ ಅಪಘಾತಗಳ ಸಂಖ್ಯೆ ಹೆಚ್ಚು. ಕತ್ತಲಲ್ಲಿ ಏಕಾಏಕಿ ನಾಯಿಗಳು ವಾಹನಕ್ಕೆ ಅಡ್ಡಬರುವುದು ಗೋಚರಿಸುವುದಿಲ್ಲ.
ಇದರಿಂದ ವಾಹನ ಸವಾರ ತಬ್ಬಿಬ್ಬಾಗಿ ಅಪಘಾತಕ್ಕೀಡಾಗುತ್ತಾನೆ. ಅಂದಹಾಗೆ ರಿಫ್ಲೆಕ್ಟರ್ ಬೆಲ್ಟ್ ಎಂದರೆ ರಸ್ತೆ ಬದಿಯ ಕಂಬಗಳಿಗೆ ಅಂಟಿಸಿರುವ, ರಾತ್ರಿ ವೇಳೆ ಮಿನುಗುವ ಬಣ್ಣದ ಪಟ್ಟಿ ಮಾದರಿಯ ಬೆಲ್ಟ್ ಇದು. ರಾತ್ರಿ ಈ ಬಣ್ಣದ ಪಟ್ಟಿಯ ಮೇಲೆ ಬೆಳಕು ಬಿದ್ದಾಗ ಮಿನುತ್ತದೆ. ದೂರದಿಂದಲೇ ಇದು ಗೋಚರವಾಗುತ್ತದೆ.
ನಾಯಿಗಳ ಕೊರಳಲ್ಲಿನ ಬೆಲ್ಟ್‌ನಲ್ಲಿಯೂ ಇದೇ ರೀತಿಯ ಗುಣಮಟ್ಟದ ಪಟ್ಟಿ ಹಾಕಲಾಗಿದೆ. ನಾಯಿಯ ಚಲನವಲನ ಬೈಕ್ ಸವಾರನಿಗೆ ದೂರದಿಂದಲೇ ತಿಳಿದು ಮುನ್ನೆಚ್ಚರಿಕೆ ವಹಿಸಬಹುದು. ತೌಸಿಫ್ ಅವರು ಎನಿಮಲ್ ಕೇರ್ ಟ್ರಸ್ಟ್‌ನ ಸಕ್ರಿಯ ಸದಸ್ಯ. ನಗರದಲ್ಲಿ ಹಾವು, ನಾಯಿ, ಪಕ್ಷಿ, ದನಗಳು ಗಾಯಗೊಂಡಿದ್ದರೆ ತಕ್ಷಣ ತಂಡದೊಂದಿಗೆ ಆಗಮಿಸಿ ಚಿಕಿತ್ಸೆ ನೀಡುತ್ತಾರೆ.
ಬೀದಿ ನಾಯಿಗಳ ರಕ್ಷಣೆ ಮಾಡಿ ಶೆಲ್ಟರ್‌ನಲ್ಲಿ ಆರೈಕೆ ಮಾಡುತ್ತಾರೆ. ಕಳೆದ ಮಳೆಗಾಲದಲ್ಲಿ ಮಡಿಕೇರಿಯಲ್ಲಿ ಪ್ರವಾಹ ಬಂದು ದನ, ನಾಯಿಗಳಿಗೆ ಆಹಾರವಿಲ್ಲದೇ ಇದ್ದಾಗ ಸ್ಥಳಕ್ಕೆ ತಂಡದೊಂದಿಗೆ ಧಾವಿಸಿ ಹಲವು ಶ್ವಾನ, ದನಗಳನ್ನು ರಕ್ಷಿಸಿದ್ದರು.
ಬೀದಿ ನಾಯಿ ಉಳಿಸಲು ಯುವಕನ ರಿಫ್ಲೆಕ್ಟಿಂಗ್ ಬೆಲ್ಟ್ ಸಾಹಸ
April 26, 2019