ಎಂಬಿಬಿಎಸ್ ಮತ್ತು ಬಿಡಿಎಸ್ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸುವ 2019 ನೇ ಸಾಲಿನ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಭಾನುವಾರ( ಮೇ 5 ರಂದು) ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವಿವಿಧ ಕೇಂದ್ರಗಳು ಸೇರಿದಂತೆ ದೇಶಾದ್ಯಂತ ನಡೆಯಲಿದೆ.
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಪರೀಕ್ಷೆ ನಡೆಸಲಿದೆ. ರಾಜ್ಯದ ದ.ಕ. ಜಿಲ್ಲೆ ಸಹಿತ 9 ಜಿಲ್ಲೆಗಳ ಸುಮಾರು 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರಾವಾಡ, ಕಲಬುರಗಿ, ಹುಬ್ಬಳ್ಳಿ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಪರೀಕ್ಷೆ ನಡೆಯಲಿದೆ.
ನಗರದ ಸೈಂಟ್ ಅಲೋಶಿಯಸ್, ಶಾರದಾ ವಿದ್ಯಾನಿಲಯ, ಕೆನರಾ ಕಾಲೇಜು, ಬಜಪೆ ಶ್ರೀದೇವಿ ಕಾಲೇಜು ಪರೀಕ್ಷಾ ಕೇಂದ್ರಗಳಾಗಿವೆ.
Tagged: exam
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕರಾವಳಿ ಯಾಕೆ ಇಳಿಯಿತು
2019ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಏಳನೇ ಹಾಗೂ ಉಡುಪಿ ಐದನೇ ಸ್ಥಾನವನ್ನು ಪಡೆದುಕೊಂಡಿದೆ.
ಕಳೆದ ಸಾಲಿನಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದ ಉಡುಪಿ ನಾಲ್ಕು ಸ್ಥಾನ ಕೆಳಗಿಳಿದಿದೆ. ದಕ್ಷಿಣ ಕನ್ನಡ 2018ರಲ್ಲಿ ನಾಲ್ಕನೇ ಸ್ಥಾನ ಪಡೆದಿತ್ತು. ಈ ಬಾರಿ ಏಳನೇ ಸ್ಥಾನಕ್ಕೆ ತೃಪ್ತಿ ಪಟ್ಟು ಕೊಳ್ಳುವಂತಾಗಿದೆ.
ಪಿಯುಸಿ ಉತ್ತಮ ಫಲಿತಾಂಶವನ್ನೇ ಪಡೆದುಕೊಂಡಿರುವ ಉಡುಪಿ ಹಾಗೂ ದಕ್ಷಿಣ ಕನ್ನಡ ಪ್ರಥಮ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಆದರೆ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಮಾತ್ರ ಅಗ್ರಸ್ಥಾನಗಳನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಲಿಲ್ಲ. ಹಾಸನ ಪ್ರಥಮ ಹಾಗೂ ರಾಮನಗರ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.