Tagged: India

ಚಂದ್ರನ ಅಂಗಳದ ಸಾಹಸದಲ್ಲಿ ಕಾರ್ಲದ ವಿಜ್ಞಾನಿ

ಚಂದ್ರನ ಅಂಗಳಕ್ಕೆ ವಿಕ್ರಂ ಲ್ಯಾಡರ್ ನ ಸಾಹಸದಲ್ಲಿ‌ ಇಸ್ರೋದ ವಿಜ್ಞಾನಿಗಳ ಸಾಲಿನಲ್ಲಿ ಕಾರ್ಲದ ಮೂಲದ ವಿಜ್ಞಾನಿ ವೈ.ದೇವದಾಸ್ ಶೆಣೈ ಕೂಡ ಒಬ್ಬರು. ಅವರು ಸರಕಾರಿ ಶಾಲೆಯಲ್ಲಿ ಓದಿದವರು. ಪೆರುವಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದಿಕೊಂಡು ಈಗ ಇಸ್ರೋದ ವಿಜ್ಞಾನಿಗಳ ಸಾಲಿನಲ್ಲಿ ನಿಂತಿರೋದು ಹೆಮ್ಮೆಯ ವಿಚಾರ.

ಕುಡ್ಲದ ಕಾರ್ನಾಡ್ ಸದಾಶಿವ ರಾವ್ ರಸ್ತೆ ಕತೆ…

ಕಾರ್ನಾಡ್ ಸದಾಶಿವ ರಾವ್ ದಕ್ಷಿಣ ಭಾರತದ ಗಾಂಧಿ ಎಂದು ಪ್ರಸಿದ್ಧಿ ಪಡೆದವರಿವರು. ಕರ್ನಾಟಕದಲ್ಲಿ ಮೊತ್ತ ಮೊದಲ ಬಾರಿಗೆ ಸ್ವಾತಂತ್ರ್ಯ ಸಂಗ್ರಾಮದ ಹೋರಾಟಕ್ಕೆ ಚಾಲನೆ ಕೊಟ್ಟ ದೇಶಪ್ರೇಮಿ. ಮಂಗಳೂರಿನ ಕಾರ್ನಾಡ್ ಎಂಬಲ್ಲಿ 1881ರಲ್ಲಿ ಜನಿಸಿದ ಸದಾಶಿವರಾವ್ ಕಾರ್ನಾಡ್ ಎಂದೇ ಚಿರಪರಿಚಿತರು. ಶ್ರೀಮಂತ ಕುಟುಂಬದಲ್ಲಿ ಜನಿಸಿದ್ದ ಕಾರ್ನಾಡರು ಸುಖದ ಸುಪ್ಪತ್ತಿಗೆಯಲ್ಲಿ ಹಾಯಾಗಿ ಕಾಲ ಕಳೆಯಬಹುದಾಗಿತ್ತು.
ಗಾಂಧೀಜಿಯವರ ಸ್ವಾತಂತ್ರ್ಯ ಸಂಗ್ರಾಮದ ಕರೆಗೆ ಓಗೊಟ್ಟು ಚಳವಳಿಗೆ ಧುಮುಕಿದ ಅವರು, ತಮ್ಮ ಜೀವನದ ಕೊನೆಯವರೆಗೂ ಹೋರಾಟಕ್ಕಾಗಿಯೇ ಬದುಕನ್ನು ಮುಡಿಪಾಗಿಟ್ಟಂತಹ ಮಹಾನುಭಾವ. ಕಾರ್ನಾಡರು ಕೇವಲ ಸ್ವಾತಂತ್ರ್ಯ ಹೋರಾಟಕಷ್ಟೇ ತಮ್ಮ ಬದುಕನ್ನು ಮೀಸಲಾಗಿಟ್ಟಿರಲಿಲ್ಲ. ಹಿಂದುಳಿದ ಜಾತಿಗಳ ಬಗ್ಗೆ, ಮೂಢನಂಬಿಕೆ ವಿರುದ್ಧ, ಸಾಮಾಜಿಕ ಕ್ಷೇತ್ರದಲ್ಲಿನ ಅನಿಷ್ಟ ಪದ್ಧತಿಗಳ ವಿರುದ್ಧ ಸತತವಾಗಿ ಹೋರಾಟ ನಡೆಸಿದ್ದರು. ಪತ್ನಿ ಶಾಂತಾಭಾಯಿ ಕೂಡ ಅವರಿಗೆ ಬೆಂಬಲವಾಗಿ ನಿಂತಿದ್ದರು. ಆಕೆ ಕೂಡ ಮಹಿಳಾ ಸಭಾವನ್ನು ಹುಟ್ಟು ಹಾಕಿ ಬಾಲ ವಿಧವೆಯರಿಗೆ ನೆರವು ನೀಡಿ ಅವರನ್ನು ಸ್ವಾವಲಂಬಿಯನ್ನಾಗಿ ಮಾಡುವಲ್ಲಿ ಪಣತೊಟ್ಟಿದ್ದರು.
1936 ರಲ್ಲಿ ಫೈಜಾಬಾದ್‌ನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿದ್ದರು. ಅದಾಗಲೇ ಅವರಿಗೆ ಜ್ವರ ವಿಪರೀತವಾಗಿ ಕಂಗೆಡಿಸಿತ್ತು. ಅಲ್ಲಿಂದ ಮುಂಬಯಿಗೆ ವಾಪಸ್ಸಾದ ಕಾರ್ನಾಡರು 1937 ಜನವರಿ 9 ರಂದು ಸಾವನ್ನಪ್ಪಿದ್ದರು. ತನ್ನ ಇಡೀ ಜೀವನವನ್ನೇ ಸ್ವಾತಂತ್ರ್ಯಕ್ಕಾಗಿ ಮೀಸಲಿಟ್ಟ ಕಾರ್ನಾಡರು, ತನ್ನೆಲ್ಲಾ ಸಂಪತ್ತನ್ನು ಬಡವರ, ದೀನ, ದಲಿತರ ಏಳಿಗೆಗಾಗಿ ವಿನಿಯೋಗಿಸಿದ್ದರು. ಅವರು ಸಾವನ್ನಪ್ಪಿದಾಗ ಶವಸಂಸ್ಕಾರಕ್ಕೂ ಹಣವಿರಲಿಲ್ಲವಾಗಿತ್ತು.
ಆ ಕಾರಣಕ್ಕಾಗಿಯೇ ಜ್ಞಾನಪೀಠ ಪ್ರಶಸ್ತಿ ಪುರಸ್ಕ್ರತ ಕಾದಂಬರಿಕಾರ ದಿ.ಡಾ.ಶಿವರಾಮ ಕಾರಂತರು ಕಾರ್ನಾಡರನ್ನು ಧರ್ಮರಾಜ ಅಂತ ಕರೆದಿದ್ದರು. ಅಂದಹಾಗೆ ಅವರ ನೆನಪಿಗಾಗಿ ಕುಡ್ಲದ ಕೆ.ಎಸ್.ರಾವ್ ರಸ್ತೆ ಅವರ ನೆನಪಿಗಾಗಿ ನಾಮಕರಣ ಮಾಡಲಾಗಿದೆ. ಈ ರಸ್ತೆಯಲ್ಲಿ ಬಹಳಷ್ಟು ವ್ಯಾಪಾರ ಕೇಂದ್ರಗಳು, ಬ್ಯಾಂಕ್‌ಗಳು ಕಾರ‍್ಯಾಚರಿಸುತ್ತಿದೆ.
pics: Nandan Bhat

ಸುಷ್ಮಾ ಸ್ವರಾಜ್ ಮತ್ತು ಕುಡ್ಲದ ಮಲ್ಲಿಗೆ !

ಬಿಜೆಪಿ ನಾಯಕಿ ದಿ.ಸುಷ್ಮಾ ಸ್ವರಾಜ್ ಸಾಕಷ್ಟು ಬಾರಿ ಮಂಗಳೂರು ಸೇರಿದಂತೆ ಕರಾವಳಿಯ ಉಡುಪಿಗೂ ಬಂದಿದ್ದಾರೆ. ವಿಶೇಷ ಎಂದರೆ ಪ್ರತಿ ಸಾರಿನೂ ಬರುವಾಗ ಅವರಿಗೆ‌‌ ಕರಾವಳಿಯ ಅವರ ಅಭಿಮಾನಿಗಳು ಪ್ರೀತಿಯಿಂದ ಮಲ್ಲಿಗೆ‌ ನೀಡಲಾಗುತ್ತಿತ್ತು. ಅವರು ಅಷ್ಟೇ ಪ್ರೀತಿಯಿಂದ ಸ್ವೀಕಾರ‌‌ ಮಾಡಿ ತಲೆಗೆ‌ ಇಟ್ಟು‌ಬಿಡುತ್ತಿದ್ದರು. ಮಲ್ಲಿಗೆ ಸೂಸುವ ಪರಿಮಳದಿಂದ ಮತ್ತಷ್ಟು ಹುರುಪು ಅವರಲ್ಲಿ ಬಂದು ಬಿಡುತ್ತಿತ್ತು ಎನ್ನುವ ಮಾತನ್ನು ಅವರ ಅಭಿಮಾನಿ ಗಳು ಹೇಳುತ್ತಾರೆ.

ಕುಡ್ಲದ ಹುಡುಗನ ಭರ್ಜರಿ ಸೆಂಚುರಿಯಾಟ

ಮಂಗಳೂರಿನ ಹುಡುಗ ಕಣ್ಣನೂರು ಲೋಕೇಶ್ ರಾಹುಲ್ ವಿಶ್ವ‌ಕಪ್ ಕ್ರಿಕೆಟ್ ಟೂರ್ನಿಯ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 111 ರನ್ ಗಳನ್ನು ಸಿಡಿಸುವ ಮೂಲಕ ವಿಶ್ವ ಕಪ್ ನಲ್ಲಿ ತನ್ನ ಮೊದಲ ಶತಕ ದಾಖಲಿಸಿಕೊಂಡರು. ಅವರು ಬೇಸಿಕಲಿ ಮಂಗಳೂರಿನ ಸುರತ್ಕಲ್ ಎನ್ಐಟಿಕೆಯಲ್ಲಿ ಪ್ರೊಫೆಸರ್ ಆಗಿದ್ದ ಕೆ.ಎನ್. ಲೋಕೇಶ್ ಅವರ ಪುತ್ರ. ಸುರತ್ಕಲ್ ಎನ್ಐ ಟಿಕೆಯ ಕ್ರಿಕೆಟ್ ಮೈದಾನದಲ್ಲಿ ಆಡಿದ ಹುಡುಗ ಕೆ.ಎಲ್.ರಾಹುಲ್ ಶತಕದ ಮೂಲಕ ವಿಶ್ವಕಪ್ ನಲ್ಲಿ ಭಾರತಕ್ಕೆ ಗೆಲುವಿನ ದಡ ಸೇರಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.

ಕುಡ್ಲದ ಹುಡುಗಿ ಪ್ರಿಯಾರ ಮುಡಿಗೆ ಮಿಸ್ ಯೂನಿವರ್ಸ್ ಆಸ್ಟ್ರೇಲಿಯಾ ಕಿರೀಟ

ಆಸೀಸ್ ನೆಲದಲ್ಲಿ ಕುಡ್ಲದ ಹುಡುಗಿಯೊಬ್ಬರು ಮಿಸ್ ಯೂನಿವರ್ಸ್ ಆಸ್ಟ್ರೇಲಿಯಾ ಕಿರೀಟವನ್ನು ಗೆದ್ದುಕೊಳ್ಳುವುದೇ ಹೆಮ್ಮೆಯ ವಿಚಾರ. ಆಸ್ಟ್ರೇಲಿಯಾದ ವಿಕ್ಟೋರಿಯಾ ಕಾನೂನು ಕಾಲೇಜಿನಲ್ಲಿ ಪದವಿ ಪಡೆದ ಕಾರ್ಕಳ ಬೇಸಿಕಲಿ ಬೆಳ್ಮಣ್ಣುವಿನ ಪ್ರಿಯಾ ಅವರು ಪ್ರಶಸ್ತಿ ಗೆದ್ದು ಬಂದಿದ್ದಾರೆ. ಅವರು ಹುಟ್ಟಿದ್ದು ಬೆಳ್ಮಣ್ಣು ಪ್ರದೇಶ ಓದು, ಬೆಳವಣಿಗೆ ಎಲ್ಲವೂ ಮಸ್ಕತ್, ಮೆಲ್ಬೋರ್ನ್‌ನಲ್ಲಿ ನಡೆದಿದೆ. ತಂದೆ, ತಾಯಿ ಇಬ್ಬರು ಕುಡ್ಲದವರು.