ಪಿಲಿಕುಳದ ‘ರಾಣಿ’ಗೆ ಐದು ಮರಿಗಳು ! ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿರುವ ೮ ವರ್ಷದ ರಾಣಿ ಎನ್ನುವ ಹೆಣ್ಣು ಹುಲಿ ಮುದ್ದಾದ 3 ಹೆಣ್ಣು ಹಾಗೂ 2 ಗಂಡು ಮರಿಗಳಿಗೆ ಜನ್ಮ ನೀಡಿದೆ.
ಕೆಲವು ದಿನಗಳ ಹಿಂದೆಯಷ್ಟೇ ರಾಣಿ ಮರಿ ಹಾಕಿದ್ದು, ಎಲ್ಲ ಮರಿಗಳು ಆರೋಗ್ಯವಾಗಿವೆ. ಅವುಗಳಿಗೆ ಸೋಂಕು ಉಂಟಾಗದಂತೆ ಎಚ್ಚರಿಕೆ ವಹಿಸಲಾಗುತ್ತಿದ್ದು, ತಾಯಿ-ಮರಿಗಳನ್ನು ಬೋನಿನಲ್ಲಿಡಲಾಗಿದೆ. ಸದ್ಯ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಇರುವುದಿಲ್ಲ. 2-3 ತಿಂಗಳ ಬಳಿಕ ಅವುಗಳಿಗೆ ಚುಚ್ಚು ಮದ್ದು- ಲಸಿಕೆ ನೀಡಿ ಆರೋಗ್ಯ ಪರಿಶೀಲಿಸಿದ ಬೋನಿನಿಂದ ಹೊರ ಬಿಡಲಾಗುವುದು ಎಂದು ಪಿಲಿಕುಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಣಿಯನ್ನು ಮೂರು ವರ್ಷಗಳ ಹಿಂದೆ ಬನ್ನೇರುಘಟ್ಟದಿಂದ ತರಲಾಗಿತ್ತು. ಸದ್ಯ ಮರಿಗಳು ತಾಯಿಯ ಹಾಲನ್ನಷ್ಟೇ ಸೇವಿಸುತ್ತಿದ್ದು, ಕೆಲವೇ ದಿನಗಳಲ್ಲಿ ಮಾಂಸಾಹಾರ ನೀಡಲಾ ಗುತ್ತದೆ. 3 ವರ್ಷಗಳ ಬಳಿಕ ಮರಿಗಳನ್ನು ಬೇರೆ ಮೃಗಾಲಯಗಳಿಗೆ ಕಳು ಹಿಸುವ ಯೋಚನೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Tagged: Pilikula
ಕುಡ್ಲ ಸಿಟಿಯೊಳಗೆ ಮೀನು ಹಿಡಿಯುವ ಜಾತ್ರೆ
ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಲೇಕ್ ಗಾರ್ಡನ್‌ನಲ್ಲಿ ಭಾನುವಾರ ಮೀನುಗಾರಿಕೆ ಇಲಾಖೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ಮತ್ತು ಪಿಲಿಕುಳ ನಿಸರ್ಗಧಾಮದ ಆಶ್ರಯದಲ್ಲಿ ಪಿಲಿಕುಳ ಮತ್ಸ್ಯೋತ್ಸವ ಮತ್ತು ಕ್ಷೇತ್ರೋತ್ಸವ ಕಾರ್ಯಕ್ರಮ ನಡೆಯಿತು.
ಈ ಹಬ್ಬದ ಅಂಗವಾಗಿ ಪಿಲಿಕುಳದ ಲೇಕ್ ಗಾರ್ಡನ್‌ನ ಕೆರೆಯಲ್ಲಿ ಬೆಳೆಸಿದ ಕಾಟ್ಲಾ, ರೋಹು, ಸಾಮಾನ್ಯ ಗೆಂಡೆ ಹಾಗೂ ಇತರೆ ಮೀನುಗಳನ್ನು ಹಿಡಿದು, ಮುಗಿಯುವ ತನಕ ಸಾರ್ವಜನಿಕ ಹರಾಜು ಹಾಕುವ ಕಾರ‍್ಯನೂ ಜತೆಯಾಗಿ ಸಾಗಿತು. ಸಾಕಷ್ಟು ಉತ್ಸಾಹಭರಿತ ಯುವಕರ ತಂಡಗಳು ಮೀನು ಹಿಡಿಯುವ ಸ್ಪರ್ಧೆಯಲ್ಲೂ ಕಾಣಿಸಿಕೊಂಡು ಭಾನುವಾರದ ವೀಕ್ ಎಂಡ್‌ನ ಪ್ರಯೋಜನ ಪಡೆದರು.

