Tagged: temple

ಕುಡ್ಲದ ದೇವಳದಲ್ಲಿ ಬಾಳೆಲೆಯಲ್ಲಿ ಪಂಚಕಜ್ಜಾಯ

ಪ್ಲಾಸ್ಟಿಕ್ ಬಳಕೆ ಹೆಚ್ಚಾದಂತೆ ದಕ್ಷಿಣ ಕನ್ನಡ ಅಥವಾ ಇತರ ಕಡೆಗಳ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್‌ಗಳಲ್ಲಿ ಪ್ರಸಾದ ಕಟ್ಟಿಕೊಡುವ ವಾಡಿಕೆಯಿದೆ. ಆದರೆ ಇವೆಲ್ಲಕ್ಕೂ ಭಿನ್ನವಾಗಿ ಗಂಜಿಮಠದ ದೇವಸ್ಥಾನದ ಪಂಚಕಜ್ಜಾಯದ ಕಟ್ಟು ಹೊಸ ಸಂಚಲನವನ್ನೇ ಮೂಡಿಸಿದೆ.

ಹೌದು ಮಂಗಳೂರು ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ ನಡುವೆ ಗಂಜಿಮಠ ಜಂಕ್ಷನ್‌ನಲ್ಲಿ ಇರುವ ಪುರಾತನ ಕಾಲದ ಶ್ರೀ ಗಣಪತಿ ದೇವಾಲಯದಲ್ಲಿ ಕುಟುಂಬದ ಹಿರಿ ತಲೆಮಾರಿನಿಂದಲೂ ಇಲ್ಲಿ ಬಾಳೆ ಎಲೆಯಲ್ಲಿ ಪಂಚ ಕಜ್ಜಾಯ ಹಾಕಿ, ಬಾಳೆ ನಾರಿನಲ್ಲಿ ಕಟ್ಟಿಕೊಡುವುದು ಸಂಪ್ರದಾಯವಾಗಿಯೇ ಬೆಳೆದು ಬಂದಿದೆ.

ಈ ರೀತಿಯ ಸಂಪ್ರದಾಯ ಎಲ್ಲ ಕಡೆಯೂ ಆರಂಭವಾಗಬೇಕಾಗಿರುವುದು ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಬೇಕಾದ ಈ ಕಾಲಘಟ್ಟದಲ್ಲಿ ಅಗತ್ಯವಾಗಿದೆ.

ಕುಡುಪು, ಕುಕ್ಕೆ, ಮಂಜೇಶ್ವರ ದೇವಳದಲ್ಲಿ ನಾಗರ ಪಂಚಮಿಗೆ ಯಾಕೆ ವಿಶೇಷ?

ಮಂಗಳೂರಿನ ಕುಡುಪು ದೇವಸ್ಥಾನ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಇದರ ಜತೆಯಲ್ಲಿ ಮಂಜೇಶ್ವರದ ಅನಂತೇಶ್ವರ ದೇವಸ್ಥಾನ ಮೂರು ದೇವಳದಲ್ಲಿ ನಾಗರ ಪಂಚಮಿ ಎಂದಾಕ್ಷಣ ಬಹಳಷ್ಟು ವಿಶೇಷತೆಗಳಿರುತ್ತದೆ. ಈ ಮೂರು ದೇವಳಗಳು ಕೂಡ ನಾಗನಿಗೆ ವಿಶಿಷ್ಟವಾದ ಸ್ಥಾನಮಾನವಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ಎಂಬ ಗ್ರಾಮದಲ್ಲಿ ಈ ಪ್ರಸಿದ್ಧ ದೇವಾಲಯ ನೆಲೆಸಿದೆ. ಸರ್ಪ ದೋಷ ನಿವಾರಣೆಗಾಗಿ ಈ ದೇವಾಲಯ ದೇಶದಲ್ಲೆ ಪ್ರಖ್ಯಾತವಾಗಿದೆ. ದೇಶದ ನಾನಾ ಮೂಲೆಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಸರ್ಪ ದೋಷದಿಂದ ಮುಕ್ತಿ ಪಡೆಯಲು ಈ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುತ್ತಾರೆ. ಇಲ್ಲಿ ಸರ್ಪಗಳ ದೇವರಾಗಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯನ್ನು ಮುಖ್ಯ ದೇವತೆಯಾಗಿ ಪೂಜಿಸಲಾಗುತ್ತದೆ. ಸರ್ಪ ದೇವತೆಗಳಾದ ವಾಸುಕಿ ಮತ್ತು ಶೇಷ ನಾಗ ಪ್ರಮುಖ.

ಕುಡುಪು ಶ್ರೀ ಅನಂತ ಪದ್ಮನಾಭ ದೇವಳ ಸರ್ಪ ದೇವಸ್ಥಾನಕ್ಕೆ ಹೆಸರುವಾಸಿಯಾಗಿದೆ. ಈ ದೇವಸ್ಥಾನವು ಕರಾವಳಿಯ ಪ್ರಮುಖ ನಾಗ ಕ್ಷೇತ್ರಗಳಲ್ಲಿ ಒಂದಾಗಿದೆ. ನಾಗರ ಪಂಚಮಿಯಂದು ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಸೇವೆಗಳೆಲ್ಲವನ್ನೂ ಮಂಜೇಶ್ವರ ಶ್ರಿಮದ್‌ ಅನಂತೇಶ್ವರ ದೇವಸ್ಥಾನದಲ್ಲಿ ನಡೆಸಲಾಗುತ್ತಿದೆ. ಇಲ್ಲಿ ವಿಷ್ಣು, ಈಶ್ವರ ಹಾಗೂ ನಾಗ ದೇವರ ಸಾನಿಧ್ಯವಿದೆ. ನಾಗರ ಪಂಚಮಿ ಹಾಗೂ ಷಷ್ಠಿ ಮಹೋತ್ಸವ ಇಲ್ಲಿನ ಪ್ರಧಾನ ಆಚರಣೆಗಳು.

ಕದ್ರಿ ಬ್ರಹ್ಮಕಲಶಕ್ಕೆ ರಿಕ್ಷಾ ಚಾಲಕರ ವಿಶಿಷ್ಟ ಸೇವೆ

ವಿಶ್ವಹಿಂದೂ ಪರಿಷತ್ ಬಜರಂಗದಳ ಆಟೋ ಚಾಲಕರ ಮಾಲಕರ ಘಟಕ ವತಿಯಿಂದ ಶ್ರೀ ಕ್ಷೇತ್ರ ಕದ್ರಿ ಬ್ರಹ್ಮಕಲಶದ ಅಂಗವಾಗಿ ಮೇ 9 ರಂದು ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಉಚಿತ ಆಟೊರಿಕ್ಷಾ ಸೇವೆ ಸಿಗಲಿದೆ.
ಘಟಕದ ನೂರು ರಿಕ್ಷಾ ಚಾಲಕರು ಕೆಪಿಟಿ ಬಳಿಯಿಂದ, ಬಂಟ್ಸ್ ಹಾಸ್ಟೆಲ್‌ನಿಂದ, ಮಲ್ಲಿಕಟ್ಟೆಯಿಂದ ದೇವಸ್ಥಾನಕ್ಕೆ ಉಚಿತವಾಗಿ ಕರೆದುಕೊಂಡು ಹೋಗಿ ಬಿಡುವ ಹಾಗೂ ದೇವಸ್ಥಾನದಿಂದ ಸಮೀಪದ ಬಸ್ ನಿಲ್ದಾಣಗಳಿಗೆ ಬಿಡುವ ವ್ಯವಸ್ಥೆ ಮಾಡಲಾಗಿದೆ.

ಈ ಮೂಲಕ ಮಂಗಳೂರಿನ ರಿಕ್ಷಾ ಚಾಲಕರು ಕದ್ರಿ ಶ್ರೀಮಂಜುನಾಥ ದೇವರ ಭಕ್ತರಿಗೆ ಪ್ರೀತಿಯ ಸೇವೆ ನೀಡುವ ಮೂಲಕ ವಿಶೇಷ ಸೇವೆ ಮಾಡುತ್ತಿದ್ದಾರೆ.

ಕರಾವಳಿಯ ದೇವಸ್ಥಾನಕ್ಕೆ ಗರ್ಭಗುಡಿಯೇ ಇಲ್ಲ !

ಈ ದೇವಸ್ಥಾನದ ವಿಶೇಷತೆ ಎಂದರೆ ಇತರ ದೇವಸ್ಥಾನಗಳಂತೆ ಈ ದೇವಸ್ಥಾನಕ್ಕೆ ಯಾವುದೇ ಕಟ್ಟಡವಿಲ್ಲ, ಗರ್ಭಗುಡಿಯಿಲ್ಲ, ಗೋಪುರವಿಲ್ಲ.

ಬದಲಾಗಿ ಇದೊಂದು ಬಯಲು ಗಣಪತಿ. ತೆರೆದ ಸ್ಥಳದಲ್ಲಿರುವ ಗಣಪತಿ. ಹರಕೆ ಹೊತ್ತು ಈ ಸ್ಥಳಕ್ಕೆ ಬಂದು ಗಣಪನಲ್ಲಿ ಪ್ರಾರ್ಥಿಸಿದರೆ 2 ತಿಂಗಳೊಳಗಾಗಿ ಅವರ ಬೇಡಿಕೆ ಈಡೇರುತ್ತದಂತೆ. ಅದರ ಮರುದಿನವೇ ಈ ಕ್ಷೇತ್ರಕ್ಕೆ ಬಂದು ಗಂಟೆ ಕಟ್ಟುತ್ತಾರೆ. ಹಾಗಾಗಿ ಇಲ್ಲಿ ಸಾವಿರಾರು ಗಂಟೆಗಳನ್ನು ಕಾಣಬಹುದು.

ಹೌದು ಇದು ಬೆಳ್ತಂಗಡಿ ಕೊಕ್ಕಡದ ಸೌತಡ್ಕ ಗಣಪತಿ ದೇವಳದ ವಿಶೇಷತೆ. ಇದು ಬರೀ ದೇವಳ ಮಾತ್ರವಲ್ಲ ಪ್ರವಾಸಿ ತಾಣವಾಗಿಯೂ ಗುರುತಿಸಿಕೊಂಡಿದೆ.